ಬೆಂಗಳೂರು:- ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ CID ವಶದಲ್ಲಿರುವ A1 ಆರೋಪಿ ಜಗ್ಗ ವಿಚಾರಣೆಯಲ್ಲಿ ಹಲವು ವಿಚಾರಗಳನ್ನು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.
ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದರು. ಸದ್ಯ ಆತನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ತನಿಖಾ ತಂಡ ವಿಚಾರಣೆ ಆರಂಭಿಸಿದೆ. ಸಿಐಡಿ ಎಸ್.ಪಿ ವೆಂಕಟೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದ್ದು, ಬಿಕ್ಲು ಶಿವನ ಜೊತೆ ಇದ್ದ ವೈಷಮ್ಯದ ಬಗ್ಗೆ, ಕಿತ್ತಗನೂರಿನ ಜಮೀನಿನ ಗಲಾಟೆಯ ಬಗ್ಗೆ, ಹಳೆ ಕೇಸ್‌ಗಳು, ಬೈರತಿ ಬಸವರಾಜ್ ಜೊತೆಗಿನ ಸಂಪರ್ಕ ಸೇರಿ ಹಲವು ವಿಚಾರಗಳನ್ನು ಬಾಯ್ಬಿಡಿಸಲು ಯತ್ನಿಸುತ್ತಿದ್ದಾರೆ.
ಈ ವೇಳೆ ಜಗ್ಗ, ನನಗೂ ಬೈರತಿ ಬಸವರಾಜ್‌ಗೂ ಆತ್ಮೀಯತೆ ಇಲ್ಲ. ಕ್ಷೇತ್ರದ ಶಾಸಕರಾದ ಹಿನ್ನೆಲೆ ಹಲವು ಕಾರ್ಯಕ್ರಮಗಳಲ್ಲಿ ಭೇಟಿಯಾಗಿದ್ದೆ. ಇನ್ನು ಕುಂಭಮೇಳಕ್ಕೆ ಹೋಗಿದ್ದಾಗ ಅಲ್ಲಿ ಸಿಕ್ಕಿದ್ದರು. ಭೇಟಿಯಾಗಿ ಫೋಟೊ ತೆಗೆದುಕೊಂಡಿದ್ದೆ. ಕ್ಷೇತ್ರದ ಶಾಸಕರು ಅಂತಾ ಫೋಟೋ ತೆಗೆಸಿಕೊಂಡಿದ್ದು, ಬಿಕ್ಲು ಶಿವ ಕೊಲೆಗೂ ಶಾಸಕರಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾನೆ.