ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಇದರಿಂದ ಬೈರತಿ ಬಸವರಾಜ್ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ಕಳೆದ ಐದು ದಿನಗಳಿಂದ ಶಾಸಕ ಬೈರತಿ ಬಸವರಾಜ್ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸಿಐಡಿ ಮೂರು ವಿಶೇಷ ತಂಡಗಳನ್ನು ರಚಿಸಿ ಮಹಾರಾಷ್ಟ್ರ, ತಮಿಳುನಾಡು ಹಾಗೂ ಗೋವಾದಲ್ಲಿ ಹುಡುಕಾಟ ನಡೆಸಿದೆ. ನಿರೀಕ್ಷಣಾ ಜಾಮೀನು ಸಿಗುವ ಭರವಸೆಯಲ್ಲಿದ್ದ ಶಾಸಕರಿಗೆ ಕೋರ್ಟ್ ಶಾಕ್ ನೀಡಿದ್ದು, ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.
ನಿರೀಕ್ಷಣಾ ಜಾಮೀನು ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಕುರಿತು ಬೈರತಿ ಬಸವರಾಜ್ ಪರ ವಕೀಲರ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಈ ನಡುವೆ ಸಿಐಡಿ ಅಧಿಕಾರಿಗಳು ಶಾಸಕರ ಬಂಧನಕ್ಕೆ ಸಜ್ಜಾಗಿದ್ದಾರೆ.



