ಬೆಂಗಳೂರು:– ಇತ್ತೀಚೆಗೆ ಭೀಕರವಾಗಿ ಕೊಲೆಯಾಗಿದ್ದ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಜಗ್ಗನ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ಸಿದ್ಧತೆ ಕೈಗೊಂಡಿದ್ದಾರೆ.
Advertisement
ಕೊಲೆ ಪ್ರಕರಣದಲ್ಲಿ ಇಲ್ಲಿತನಕ ಹನ್ನೊಂದು ಜನ ಆರೋಪಿಗಳ ಬಂಧನವಾಗಿದೆ. ಆದರೆ ಎ1 ಆರೋಪಿಯಾಗಿರುವ ಜಗ್ಗ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಜಗದೀಶ್ ಅಲಿಯಾಸ್ ಜಗ್ಗನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಜಗ್ಗ ವಿದೇಶಕ್ಕೆ ಎಸ್ಕೇಪ್ ಆಗುವ ಬಗ್ಗೆ ಮಾಹಿತಿಗಳು ಸಿಕ್ಕ ಹಿನ್ನೆಲೆಯಲ್ಲಿ ಬುಧವಾರ ಆತನ ಪತ್ತೆಗಾಗಿ ಲುಕ್‌ಔಟ್ ನೋಟಿಸ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ.