ಬಿಕ್ಲು ಶಿವ ಕೊಲೆ ಕೇಸ್: ಮತ್ತೆ ಮೂವರ ಬಂಧನ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ್ದ ಬಿಕ್ಲು ಶಿವನ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತರನ್ನು ಅನಿಲ್, ಅರುಣ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಅರುಣ್ ಹಾಗೂ ನವೀನ್ ಇಬ್ಬರು ಪ್ರಕರಣದ ಎ1 ಆರೋಪಿಯಾಗಿರುವ ಜಗದೀಶ್‌ನ ಸಹಚರರಾಗಿದ್ದಾರೆ.

ಕೊಲೆ ಬಳಿಕ ಅರುಣ್ ಹಾಗೂ ನವೀನ್ ತಲೆಮರೆಸಿಕೊಂಡಿದ್ದರು. ಸದ್ಯ ಮೂವರನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ.

ಘಟನೆ ವಿವರ:

ರೌಡಿಶೀಟರ್ ಬಿಕ್ಲು ಶಿವನನ್ನು ಕಳೆದ ಜುಲೈ 15ರ ರಾತ್ರಿಯಂದು ಹಲಸೂರು ಮನೆಯ ಎದುರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದ ಆರೋಪಿಗಳಾದ ಕಿರಣ್, ವಿಮಲ್, ಪ್ರದೀಪ್, ಮದನ್ ಹಾಗೂ ಸ್ಯಾಮ್ಯುವೆಲ್‌ನನ್ನು ಪೊಲೀಸರು ಈ ಹಿಂದೆಯೇ ಬಂಧಿಸಿದ್ದರು. ಪ್ರಕರಣದ ಎ5 ಆರೋಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಶನಿವಾರ ವಿಚಾರಣೆ ಮಾಡಲಾಗಿತ್ತು. ಇದೀಗ ಪ್ರಕರಣ ಸಂಬಂಧ ಮತ್ತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here