ಕಲಬುರ್ಗಿ:- ಕೈದಿಗಳ ಬಿಂದಾಸ್ ಲೈಫ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆಯಲ್ಲಿ ಅಧಿಕಾರಿಗಳ ಲೋಪ ಬಯಲಾದ ಹಿನ್ನೆಲೆ, ಕಲ್ಬುರ್ಗಿ ಸೆಂಟ್ರಲ್ ಜೈಲಿನ ಇಬ್ಬರು ಜೈಲರ್ ಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಕಾರಾಗೃಹದ ಕರ್ಮಕಾಂಡದ ಬಗ್ಗೆ ಹಲವು ಮಾಧ್ಯಮಗಳು ವರದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದರು. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿತ್ತು. ಹೀಗಾಗಿ ಇಬ್ಬರು ಜೈಲರ್‌ಗಳನ್ನ ಅಮಾನತುಗೊಳಿಸಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು 2ನೇ ದಿನವಾದ ಶನಿವಾರವೂ ಜೈಲಿನಲ್ಲಿ ಶೋಧಕಾರ್ಯ ಮುಂದುವರಿಸಿದ್ದಾರೆ.
ಕಾರಾಗೃಹ ಇಲಾಖೆ ಡಿಜಿ ಕಚೇರಿಯ ಎಸ್ಪಿ ಯಶೋಧಾ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಈಗಾಗಲೇ ಜೈಲಿನ ಅಧಿಕಾರಿಗಳ ತನಿಖೆ ನಡೆಸಿರುವ ಎಸ್ಪಿ ಯಶೋಧಾ ಅವರು, ಇಂದು ಜೈಲಿನ ವಾರ್ಡನ್ ಸೇರಿ ಹಲವರ ವಿಚಾರಣೆ ನಡೆಸುವ ಸಾಧ್ಯತೆಯಿದೆ.