HomeBengaluru Newsರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಹೆಸರಘಟ್ಟ ಪೌಲ್ಟ್ರಿ ಫಾರಂನಲ್ಲಿ H5N1 ಪತ್ತೆ

ರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಹೆಸರಘಟ್ಟ ಪೌಲ್ಟ್ರಿ ಫಾರಂನಲ್ಲಿ H5N1 ಪತ್ತೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರ ಆತಂಕ ಹೆಚ್ಚಾಗಿದೆ. H5N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕನ್ ಪ್ರಿಯರಲ್ಲಿ ಆತಂಕ ಮೂಡಿದೆ.

ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಿದ ಪ್ರಾಥಮಿಕ ತಪಾಸಣೆಯಲ್ಲಿ H5N1 ವೈರಸ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಪೌಲ್ಟ್ರಿ ಫಾರಂನಲ್ಲಿ ಇದ್ದ ಕೋಳಿಗಳನ್ನು ಗುಂಡಿ ತೆಗೆದು ಮುಚ್ಚಲಾಗಿದೆ.

ಈ ಪೌಲ್ಟ್ರಿ ಫಾರಂನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಮಾಡಲಾಗುತ್ತಿತ್ತು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕ್ರಮ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಪಂಚಾಯಿತಿಗಳಿಗೆ ನೋಟಿಸ್ ನೀಡಲಾಗಿದ್ದು, ಕೋಳಿ ಸಾಕಾಣೆ ಶೆಡ್‌ಗಳು ಹಾಗೂ ಕೋಳಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.

ಕೋಳಿ ಸಾಕಾಣೆಗಾರರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಪಶು ವೈದ್ಯಾಧಿಕಾರಿಗಳು ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಸದ್ಯ ಕೇಂದ್ರ ಸರ್ಕಾರದಿಂದ ಬಂದ ಮಾಹಿತಿಯ ಆಧಾರದಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!