ರಾಯಚೂರು: ದೇಶದಲ್ಲಿ ಹಕ್ಕಿ ಜ್ವರದ ಭೀತಿಯ ನಡುವೆ, ಇವಾಗ ರಾಜ್ಯದಲ್ಲಿ ಕೂಡ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ. ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಪ್ರತೀದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳ ಸಾವನ್ನಪ್ಪುತ್ತಿದೆ.
Advertisement
ಮಕ್ಸೂದ್ ಅಲಿ ಎಂಬುವವರ ತೋಟದಲ್ಲಿ ಪ್ರತಿದಿನ 8-10 ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪಕ್ಷಿಗಳು ಮರದ ಮೇಲಿನಿಂದ ಏಕಾಏಕಿ ಕೆಳಗೆ ಬಿದ್ದು ಸಾಯುತ್ತಿವೆ.
ಪಕ್ಷಿಗಳ ಸಾವಿಗೆ ಕಾರಣ ತಿಳಿಯದಿರುವುದರಿಂದ ಸ್ಥಳೀಯರಲ್ಲಿ ಹಕ್ಕಿ ಜ್ವರದ ಆತಂಕ ಶುರುವಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಪಶುವೈದ್ಯಾಧಿಕಾರಿಗಳು, ಮರದಿಂದ ಬಿದ್ದ ಪಕ್ಷಿಗಳಿಗೆ ಇಂಜೆಕ್ಷನ್ ನೀಡಿ ರಕ್ಷಣೆ ಮಾಡಿದ್ದಾರೆ.