ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದ್ದು, ಅವರ ನಿವಾಸ ಸೇರಿ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಹ್ಯಾರಿಸ್ ಬಿಡಿಎ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡರಾಗಿದ್ದಾರೆ. ನಲಪಾಡ್ ನಿವಾಸದಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ದಾಳಿ ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದು, ಹ್ಯಾಕರ್ ಶ್ರೀಕಿ ಜೊತೆ ಆರ್ಥಿಕ ವ್ಯವಹಾರ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಇಡಿ ತನಿಖೆ ಕೈಗೊಂಡಿದೆ.
ನಲಪಾಡ್ ಮತ್ತು ಶ್ರೀಕಿ ನಡುವೆ ಸುಮಾರು ಆರು ವರ್ಷಗಳ ಕಾಲ ಆರ್ಥಿಕ ಸಂಪರ್ಕ ಇದ್ದು, ಇಬ್ಬರೂ ಸೇರಿ ಸುಮಾರು 4.5 ಕೋಟಿ ರೂ. ವಹಿವಾಟು ನಡೆಸಿದ್ದಾರೆ ಎನ್ನಲಾಗಿದೆ.



