ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಶ್ರೀಕಿ ಜೊತೆಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ಜಾಮೀನು ಸಿಕ್ಕಿದೆ. ಈ ಮೂವರು ಆರೊಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ. ನ್ಯಾಯಾಧೀಶ ಎನ್.ಸುಬ್ರಹ್ಮಣ್ಯ ಅವರು ಆರೋಪಿಗಳಿಗೆ ಜಾಮೀನು ನೀಡಿ ಆದೇಶಿಸಿದ್ದಾರೆ.ಶ್ರೀಕಿಯಿಂದ 50 ಸಾವಿರ ಮೊತ್ತದ ಬಾಂಡ್ ಹಾಗೂ ಓರ್ವ ವ್ಯಕ್ತಿ ಶೂರಿಟಿ ಪಡೆಯಲಾಗಿದೆ.
ರಾಬೀನ್ ಖಂಡೇಲ್ ವಾಲ ಬಳಿ 25 ಸಾವಿರ ಮೌಲ್ಯದ ಬಾಂಡ್ ಹಾಗೂ ಓರ್ವ ವ್ಯಕ್ತಿಯ ಶೂರಿಟಿ ಪಡೆಯಲಾಗಿದೆ. ತನಿಖೆ ನಡೆಸಿ 60 ದಿನದೊಳಗೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬವಾದ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜಾಮೀನು ಮಂಜೂರು ಮಾಡಲಾಗಿದೆ. ತುಮಕೂರು ಉದ್ಯಮಿಯೊಬ್ಬರಿಗೆ ಆನ್‌ಲೈನ್ ವಂಚಿಸಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.