HomePolitics Newsಕ್ರಾಸ್ ವೋಟಿಂಗ್‌ಗೆ ಬಿಜೆಪಿ ಬ್ರೇಕ್? ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ

ಕ್ರಾಸ್ ವೋಟಿಂಗ್‌ಗೆ ಬಿಜೆಪಿ ಬ್ರೇಕ್? ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ

For Dai;y Updates Join Our whatsapp Group

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ಆರೋಪದ ಬೆನ್ನಲ್ಲೇ ರಾಜ್ಯ ಬಿಜೆಪಿ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ.

ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆಹಚ್ಚುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಮುಂದಿನ ವಾರ ಈ ಸಭೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿ ಬಿಜೆಪಿ ಶಾಸಕರಿಂದ ದೇವರ ಮೇಲೆ ಆಣೆ-ಪ್ರಮಾಣ ಮಾಡಿಸಿ ಮಾಹಿತಿ ಸಂಗ್ರಹಿಸುವ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, “ಪರಿಷತ್ ಚುನಾವಣೆಯಲ್ಲಿ ನಮ್ಮಿಂದ ನಾಲ್ಕು ಅಡ್ಡಮತಗಳು ಬಿದ್ದಿವೆ ಎಂಬ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು, ಶಾಸಕರ ನಡವಳಿಕೆ ಬಗ್ಗೆ ಬೇಸರ ಪಟ್ಟಿದ್ದಾರೆ. ಹೀಗಾಗಿ ಎಲ್ಲ 63 ಶಾಸಕರ ಮೇಲೂ ಅನುಮಾನ ಪಡುವಂತಾಗಿದೆ. ನಿನ್ನೆ ನಿತಿನ್ ನಬಿನ್ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ದೆಹಲಿಗೆ ನಾನು ಹಾಗೂ ಅಶೋಕ್ ಅವರು ಹೋಗುತ್ತಿದ್ದು, ಈ ವಾರದಲ್ಲೇ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಅಶೋಕ್ ಅವರ ಜತೆ ಚರ್ಚೆ ಮಾಡುತ್ತೇನೆ. ತಾಯಿಗೆ ದ್ರೋಹ ಮಾಡಿದ ಶಾಸಕರು ಯಾರೆಂದು ಶ್ರೀಕ್ಷೇತ್ರದಲ್ಲೇ ಗೊತ್ತಾಗಲಿ ಎಂದವರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಒಟ್ಟು 11 ಮತಗಳು ಕ್ರಾಸ್ ವೋಟಿಂಗ್ ಆಗಿವೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದರ ಪರಿಣಾಮ ಜೆಡಿಎಸ್ ಅಭ್ಯರ್ಥಿ ಸೋಲು ಕಂಡಿದ್ದರೆ, ಬಿಜೆಪಿ ಅಭ್ಯರ್ಥಿಗಳ ಪೈಕಿ ಒಬ್ಬರು ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಈ ಬೆಳವಣಿಗೆಯ ಬಳಿಕ ಪಕ್ಷಕ್ಕೆ ದ್ರೋಹ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದು, ಧರ್ಮಸ್ಥಳ ಸಭೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img