ಧಾರವಾಡ: ಸದ್ಯ ನಡೆದಿರುವ ಪಂಚರಾಜ್ಯಗಳ ಚುನಾವಣೆಯಲ್ಲಿ ನಾವು ಐದೂ ರಾಜ್ಯಗಳಲ್ಲಿ ಗೆಲುವು ಸಾಧಿಸುವ ಗುರಿ ಇದೆ. ಆದರೆ, ಕನಿಷ್ಠ ಮೂರು ರಾಜ್ಯಗಳಲ್ಲಾದರೂ ನಾವು ಗೆಲುವು ಸಾಧಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Advertisement
ಧಾರವಾಡದಲ್ಲಿ ಮಾತನಾಡಿದ ಅವರು, ಮಿಜೋರಾಂನಲ್ಲಿ ಎನ್‌ಡಿಎ ಸರ್ಕಾರ ಬರುತ್ತದೆ. ತೆಲಂಗಾಣದಲ್ಲಿ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.