ಬೆಳಗಾವಿ: ನಾಲಿಗೆ ಹರಿಬಿಟ್ಟಿದಕ್ಕೆ ಬಿಜೆಪಿಯಲ್ಲಿ ಯತ್ನಾಳರನ್ನ ಉಚ್ಛಾಟನೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾಲಿಗೆ ಹರಿಬಿಟ್ಟಿದಕ್ಕೆ ಬಿಜೆಪಿಯಲ್ಲಿ ಯತ್ನಾಳರನ್ನ ಉಚ್ಛಾಟನೆ ಮಾಡಿದ್ದಾರೆ.
Advertisement
ನಮ್ಮ ಸಮಾಜದವರು ಅಂತಾ ನಾವು ನಮ್ಮ ಚೌಕಟ್ಟಿನಲ್ಲಿ ಅವರಿಗೆ ಗೌರವ ಕೊಡ್ತೀವಿ. ಆದರೆ, ಯತ್ನಾಳ್ ಮಾತನಾಡೋ ರೀತಿ ನೋಡಿದ್ರೆ ಅವರ ನಾಲಿಗೆಗೆ ತಲೆಗೆ ಕನೆಕ್ಷನ್ ತಪ್ಪಿದೆ ಅನಿಸುತ್ತೆ ಎಂದು ಹೇಳಿದ್ದಾರೆ.
ಇನ್ನೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೊಸ ಪಕ್ಷ ಕಟ್ಟುವ ವಿಚಾರದ ಬಗ್ಗೆ ಮಾತನಾಡಿದ ಸಚಿವೆ, ಯತ್ನಾಳರಿಗೆ ಒಳ್ಳೆಯದಾಗಲಿ ,ಭಗವಂತನ ಆಶೀರ್ವಾದ ಇರಲಿ. ಆದಷ್ಟು ಬೇಗ ಹೊಸ ಪಕ್ಷ ಕಟ್ಟಿ ರಾಜ್ಯದಲ್ಲಿ ಸಂಘಟನೆ ಮಾಡಲಿ ಎಂದರು.