ಬೆಂಗಳೂರು: ಬಿಜೆಪಿಯವರಿಗೆ ಪ್ರಿಯಾಂಕ್ ಖರ್ಗೆ ಅವರನ್ನು ಕಂಡರೆ ಹೊಟ್ಟೆಯುರಿ ಇದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಪ್ರಿಯಾಂಕ್ ಖರ್ಗೆ ಅವರನ್ನು ಕಂಡರೆ ಹೊಟ್ಟೆಯುರಿ ಇದೆ.
Advertisement
ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಿಯಾಂಕ್ ಖರ್ಗೆ ಅವರ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಹವಣಿಸುತ್ತಿದೆ. ಆದರೆ ಬಿಜೆಪಿಯವರ ಸುಳ್ಳು ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಬಿಜೆಪಿ ಆಗ್ರಹ ಹಾಸ್ಯಾಸ್ಪದ. ಯಾವ ಆಧಾರದಲ್ಲಿ ಅವರು ಸಿಬಿಐ ತನಿಖೆಗೆ ಒತ್ತಾಯಿಸುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯದ ಸಿಐಡಿ ಈ ಪ್ರಕರಣದ ತನಿಖೆ ಮಾಡಲು ಸಶಕ್ತವಾಗಿದೆ ಎಂದರು.