ಬೆಂಗಳೂರು:- ಇಂಧನ ಸಚಿವ ಕೆಜೆ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಿದೆ. ಸ್ಮಾರ್ಟ್ ಮೀಟರ್ ಹಗರಣ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತಕ್ಕೆ ಶಾಸಕರಾದ ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ನೇತೃತ್ವದ ನಿಯೋಗದಿಂದ ದೂರು ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ನೀಡಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ಮೇಲೆ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ನೀಡಿದ್ದೇವೆ. ಇಂಧನ ಸಚಿವ ಕೆಜೆ ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ವಿರುದ್ಧ ದೂರು ನೀಡಿದ್ದು, ರಾಜಶ್ರೀ ಕಂಪನಿಯ ಕಂಬ ತಯಾರಿಸುವ ಕಂಪನಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಟೆಂಡರ್ ನೀಡಿದ್ದಾರೆ. ನಿಯಮಗಳ ಉಲ್ಲಂಘನೆ, ಬ್ಲಾಕ್ ಲಿಸ್ಟ್ ಕಂಪನಿಗೆ ಟೆಂಡರ್ ನೀಡಿದ್ದಾರೆ ಎಂದು ಆರೋಪಿಸಿದರು.