BJP ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್’ಗೆ ಶಿಫಾರಸು

0
Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ, ಮಲ್ಲಿಕಾರ್ಜನ ಖರ್ಗೆ ಕುಟುಂಬದ ವಿರುದ್ಧದ ಸಿಎ ಸೈಟ್ ಹಗರಣ ಹಾಗೂ ಎಂಬಿ ಪಾಟೀಲ್ ವಿರುದ್ಧವೂ ಸ್ವಜನ ಪಕ್ಷಪಾತದ ಆರೋಪದ ಬೆನ್ನಲ್ಲೇ ವಿರೋಧ ಪಕ್ಷ ಬಿಜೆಪಿಗೆ ಸಂಕಷ್ಟ ಎದುರಾಗಿದೆ.

Advertisement

ಹೌದು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ತನಿಖಾ ವರದಿಯನ್ನು ನ್ಯಾಯಮೂರ್ತಿ ಜಾನ್ ಮೂಕಲ್ ಡಿ. ಮೈಕಲ್ ಕುನ್ಹಾ ಆಯೋಗವು ಸಲ್ಲಿಸಿದೆ. ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮವಾಗಿ ವ್ಯವಹಾರ ನಡೆದಿರುವುದು ಪತ್ತೆಯಾಗಿದೆ. ಬಿ.ಎಸ್.  ಯಡಿಯೂರಪ್ಪ ಮತ್ತು ಬಿ. ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಆಯೋಗ ಶಿಫಾರಸು ಮಾಡಿದೆ.

ಅಂದಿನ ಸರ್ಕಾರ ಚೀನಾ ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ. ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮ ಎಸಗಲಾಗಿದೆ ಎಂದು ವರದಿಯಲ್ಲಿದೆ.

ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​​​ ಡಿ.ಕುನ್ಹಾ ನೇತೃತ್ವದಲ್ಲಿ ಆಗಸ್ಟ್ 25, 2023ರಲ್ಲಿ‌ ರಚನೆಯಾಗಿದ್ದ ತನಿಖಾ ಆಯೋಗ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದು ಪತ್ತೆ ಮಾಡಿದೆ.

ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್​ಗಳನ್ನು ನೇರವಾಗಿ ಖರೀದಿಸುವ ಕುರಿತು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಇ ಕೆಟ್​ಗಳನ್ನು ದುಬಾರಿ ದರದಲ್ಲಿ ಕೊಂಡುಕೊಳ್ಳಲಾಗಿದೆ ಎಂದು ಬಯಲಾಗಿದೆ. ಹೀಗಾಗಿ, ಬಿಎಸ್​ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಆಯೋಗ ಶಿಫಾರಸು ಮಾಡಿದೆ.


Spread the love

LEAVE A REPLY

Please enter your comment!
Please enter your name here