ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಇದೆ, ಆದರೆ ಇಲ್ಲಿನ ನಾಯಕರು ಧ್ವನಿ ಎತ್ತುತ್ತಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28,152 ಕೋಟಿ ರೂಪಾಯಿ ನೀಡಿದೆ.
ಉತ್ತರ ಪ್ರದೇಶಕ್ಕೆ ಮಾತ್ರ 32 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಈ ಮೂಲಕ ಪದೇಪದೆ ಕೆಣಕುವ ಪ್ರಯತ್ನ ನಡೆಯುತ್ತಿದೆ. ದುಃಖದಿಂದ ಈ ಮಾತು ಹೇಳಬೇಕಿದೆ. ರಾಜ್ಯದ ಅಭಿವೃದ್ಧಿಗೆ ಅನ್ಯಾಯವಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದರು.
ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಇದೆ, ಆದರೆ ಇಲ್ಲಿನ ನಾಯಕರು ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ. ಕರ್ನಾಟಕದಿಂದ ಬಿಜೆಪಿಯ 19 ಸಂಸದರು ಆಯ್ಕೆಯಾಗಿದ್ದಾರೆ. ಈ ಸಂಸದರು ಧ್ವನಿ ಎತ್ತುತ್ತಿಲ್ಲ. ನಾನು ಒತ್ತಾಯ ಮಾಡಿತ್ತೇನೆ, ನಿಮ್ಮ ನೀತಿ ಬದಲಾವಣೆ ಮಾಡಿ. ರಾಜ್ಯಕ್ಕೆ, ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ ಎಂದು ಒತ್ತಾಯಿಸಿದರು.