ಬಿಜೆಪಿಯಲ್ಲಿ ಕಾಂಗ್ರೆಸ್ʼಗಿಂತ ಡಬಲ್ ಕುಟುಂಬ ರಾಜಕಾರಣ ಇದೆ: ಬಿ.ಕೆ.ಹರಿಪ್ರಸಾದ್

0
Spread the love

ಮಂಗಳೂರು: ಬಿಜೆಪಿಯಲ್ಲಿ ಕಾಂಗ್ರೆಸ್ʼ​​ಗಿಂತ ಡಬಲ್​ ಕುಟುಂಬ ರಾಜಕಾರಣ ಇದೆ ಎಂದು ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಕಾಂಗ್ರೆಸ್​​ಗಿಂತ ಡಬಲ್​ ಕುಟುಂಬ ರಾಜಕಾರಣ ಇದೆ. ಒಂದೊಂದು ಕುಟುಂಬದಲ್ಲಿ 10 ಜ‌ನರು ರಾಜಕಾರಣದಲ್ಲಿ ಇದ್ದಾರೆ. ಕಾಂಗ್ರೆಸ್​ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಾರೆ.

Advertisement

ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ, ನಮ್ಮ ತಟ್ಟೆಯ ನೊಣ ನೋಡುತ್ತಿದ್ದಾರೆ. ನಾವು ಕೊಟ್ಟಿರುವ ಕಾರ್ಯಕ್ರಮಗಳಿಂದ ಶಿಗ್ಗಾಂವಿಯಲ್ಲಿ ಗೆದ್ದಿದ್ದೇವೆ. ನಾವು ಕಾಂಗ್ರೆಸ್​​ ಪಕ್ಷದವರು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ. ಇಡಿ, ಐಟಿ ಬಳಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಸಿಎಂ ಬದಲಾಗುತ್ತಾರೆ ಅಂತಾ ಕೆಲವರು ತಿರುಕನ ಕನಸು ಕಾಣುತ್ತಿದ್ದರು. ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಆಗಲ್ಲ. ಸಿಎಂ ಬದಲಾವಣೆ ಯಡಿಯೂರಪ್ಪನವರ ಸಹಿ ಮಾಡಿದ ಹಾಗೇ ಅಲ್ಲ. ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here