ವಿಜಯಪುರ: ಬಿಜೆಪಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಎನ್ನುವುದನ್ನು ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ.
Advertisement
ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಆಲಮಟ್ಟಿ ಸಂತ್ರಸ್ತರ ಹೋರಾಟ ವಿಚಾರಕ್ಕೆ 524 ಮೀ ಎತ್ತರವಿದೆ ಏನು ಮಾಡಬೇಕು ಅದನ್ನು ನಾವು ಮಾಡುತ್ತೇವೆ. ಅದರ ಭೂಸ್ವಾಧೀನ ನೋಟಿಫಿಕೇಷನ್ ಆಗಬೇಕಿದೆ. ನೋಟಿಫಿಕೇಷನ್ ಮುಂಚೆಯೇ ಅಲ್ಲಿ ಕೆಲಸ ಮಾಡಬೇಕಾ? ಬೇಡವಾ? ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದಿದೆ ಎಂದರು.