ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿರುವ ಬಿದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಸ್ಥರು ನಡೆಸುವ ಫೋನ್ ಪೇ, ಗೂಗಲ್ ಪೇ, ಆನ್‌ಲೈನ್ ಪೇಮೆಂಟ್‌ಗಳ ವಿಚಾರವಾಗಿ ಬಿಜೆಪಿ ವತಿಯಿಂದ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ತೊಂದರೆಗೆ ಒಳಗಾದ ವ್ಯಾಪಾರಸ್ಥರು, ನೋಟಿಸ್ ಬಗ್ಗೆ ಪರಿಹಾರಕ್ಕಾಗಿ ಸಹಾಯವಾಣಿ -8884245123ಕ್ಕೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಕೊಳ್ಳಬಹುದಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸಹಾಯವಾಣಿ ಜು.21ರಿಂದ ಪ್ರಾರಂಭವಾಗಿದ್ದು, ಬೀದಿಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳಿಗೆ ಈಗಾಗಲೇ ರಾಜ್ಯ ಸರ್ಕಾರದ ಮೂಲಕ ನೋಟೀಸ್ ನೀಡಲಾಗಿದೆ. ಈ ವಿಚಾರದಲ್ಲಿ ದೊಡ್ಡ ಗೊಂದಲ ಶುರುವಾಗಿದ್ದು, ಬಡ ವ್ಯಾಪಾರಿಗಳಲ್ಲಿ ಆತಂಕ ಮೂಡಿದೆ. ಇದರ ಪರಿಹಾರೋಪಾಯಗಳನ್ನು ಕಾಂಗ್ರೆಸ್ ಸರ್ಕಾರ ಮಾಡಬೇಕಿತ್ತು ಎಂದು ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ವ್ಯಾಪಾರಿಗಳು ಕಳ್ಳರಲ್ಲ ಮತ್ತು ತೆರಿಗೆಯನ್ನು ವಂಚಿಸುವವರಲ್ಲ. ಆದರೆ ತೆರಿಗೆಯ ಪರಿಸ್ಥಿತಿ ಅವರಿಗೆ ಅರ್ಥವಾಗಿಲ್ಲ ಮತ್ತು ರಾಜ್ಯ ಸರ್ಕಾರದವರು ಅವರಿಗೆ ಅರ್ಥ ಮಾಡಿಸಿಲ್ಲ. ಆದ್ದರಿಂದ, ರಾಜ್ಯ ಸರ್ಕಾರ ಬಡಜನರ ರಕ್ಷಣೆಗೆ ಬರಬೇಕು. ರಾಜ್ಯ ಸರ್ಕಾರ ವ್ಯಾಪಾರಿಗಳಿಗೆ ನೀಡಿರುವ 14 ಸಾವಿರ ನೋಟಿಸ್‌ಗಳು ಕಾನೂನಿಗೆ ವಿರುದ್ಧವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here