ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: CM ಸಿದ್ದರಾಮಯ್ಯ!

0
Spread the love

ಹುಬ್ಬಳ್ಳಿ:- ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಜನತಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಕ್ಕಿಯಿಂದ ಚಿನ್ನದವರೆಗೂ ಎಲ್ಲದರ ಬೆಲೆ ಆಕಾಶಕ್ಕೆ ಏರಿದೆ. ದೇಶದ, ರಾಜ್ಯದ ಜನರಿಗೆ ಬಿಜೆಪಿ ಪರಿವಾರದ ಈ ಜನದ್ರೋಹ ಅರ್ಥವಾಗಿದೆ. ಇದನ್ನು ಮರೆ ಮಾಚಲು ತಮ್ಮ ಜನದ್ರೋಹವನ್ನು ಮುಚ್ಚಿಕೊಳ್ಳಲು ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು. ಉಪ್ಪು, ಸಕ್ಕರೆ, ಟೀ, ಕಾಫಿ, ಅಕ್ಕಿ, ಬೇಳೆ, ಎಣ್ಣೆ, ಕಾಳು, ಚಿನ್ನ, ಬೆಳ್ಳಿ, ರಸಗೊಬ್ಬರ, ಔಷಧ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಎಲ್ಲದರ ಬೆಲೆ ಆಕಾಶಕ್ಕೆ ಏರಿಸಿರುವ ಮೋದಿಯವರೇ ನೀವು ಯಾವುದನ್ನು ತಾನೆ ಬಿಟ್ಟಿದ್ದೀರಿ ಎಂದರು. ಡಾಲರ್ ಬೆಲೆ 2014 ರಲ್ಲಿ 59 ರೂಪಾಯಿ ಇತ್ತು. ಇವತ್ತು 86 ರೂಪಾಯಿ ಆಗಿದೆ. ಇದಕ್ಕೆ ಯಾರು ಕಾರಣರು ಮೋದಿಯವರೇ ? ಇದೇನಾ ನಿಮ್ಮ ಅಚ್ಛೆ ದಿನ್ ಎಂದು ವ್ಯಂಗ್ಯವಾಡಿದರು.

50 ಕೆಜಿ ಸಿಮೆಂಟ್ ಬೆಲೆ 2014 ರಲ್ಲಿ 200 ಇದ್ದದ್ದು ಈಗ 450 ರೂ ಆಗಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 425 ಇದ್ದದ್ದು ಇಂದು 850 ದಾಟಿದೆ. ಶೇ100 ರಷ್ಟು ಬೆಲೆ ಏರಿಕೆ ಮಾಡಿದ್ದೀರಿ. ಜನದ್ರೋಹದ ಪರಮಾವಧಿ ಮುಂದುವರೆಸಿ ಸಿಲಿಂಡರ್ ಸಬ್ಸಿಡಿ ತೆಗೆದು ಹಾಕಿ ಬಡವರ ಮತ್ತು ಮಧ್ಯಮ ವರ್ಗದವರ ವಿರೋಧಿ ಆಗಿರುವ ಮೋದಿಯವರೇ ನಿಮ್ಮ ವಂಚನೆಗೆ ಕೊನೆಯೇ ಇಲ್ಲವೇ ಎಂದು ಪ್ರಶ್ನಿಸಿದರು.

ಪ್ರಹ್ಲಾದ್ ಜೋಶಿಯವರೇ ನೀವು ಮತ್ತು ಮೋದಿಯವರು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದ್ದೀರಿ. ಆದರೆ, ನಿಮ್ಮ ಚಾಳಿಯನ್ನು ನಮ್ಮ ಮೇಲೆ ಹೊರಿಸಲು ಯತ್ನಿಸುತ್ತಿದ್ದೀರಿ.‌ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಹಾಲಿನ ದರ 4ರೂ ಹೆಚ್ಚಿಸಿ ಇಷ್ಟೂ ಹಣವನ್ನೂ ರೈತರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಹತ್ತು ಪೈಸೆ ಕೂಡ ಸರ್ಕಾರಕ್ಕೆ ಬರುವುದಿಲ್ಲ. ಆದರೆ, ನೀವು ಹೆಚ್ಚಿಸಿದ ಬೆಲೆ ಏರಿಕೆ ಯಾವ ಭಾರತೀಯರಿಗೆ ಸಿಗುತ್ತಿದೆ ಹೇಳಿ ಎಂದರು. ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅಸಮಾನತೆ, ತಾರತಮ್ಯ ಹೋಗಿಲ್ಲ ಎಂದರು.

ಆದ್ದರಿಂದ ನಾವು ನಮ್ಮ ಪ್ರಣಾಳಿಕೆಯಲ್ಲಿ ಆರ್ಥಿಕ, ಸಾಮಾಜಿಕ, ಜಾತಿ ಗಣತೆ ಬಗ್ಗೆ ಭರವಸೆ ಕೊಟ್ಟಿದ್ದೆವು. ನಾವು ಮಾಡಿದ ಘೋಷಣೆಯಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಮತ್ತು ರಾಹುಲ್ ಗಾಂಧಿಯವರು ಪಾರ್ಲಿಮೆಂಟಿನಲ್ಲಿ ನಿರಂತರ ಧ್ವನಿ ಎತ್ತಿ ಹೋರಾಟ ನಡೆಸಿದ್ದರು. ಇದರ ಪರಿಣಾಮ ಈಗ ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದಿದೆ. ಇದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ಸೈದ್ಧಾಂತಿಕ ಬದ್ಧತೆಗೆ ಸಿಕ್ಕ ಗೆಲುವು ಎಂದರು.


Spread the love

LEAVE A REPLY

Please enter your comment!
Please enter your name here