ಬೆಂಗಳೂರು: ಬಿಜೆಪಿ ನನ್ನ ತಾಯಿ, ನಾನು ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಲ್ಲ, ಬಿಜೆಪಿ ನನ್ನ ತಾಯಿ. ಬ್ರಿಗೇಡ್ ಬಿಡಿ ಎಂದು ಮೋದಿ ಯಾವುದೇ ಕಾರಣಕ್ಕೂ ಹೇಳಲ್ಲ ಎಂದರು. ಬಿಜೆಪಿಯಲ್ಲಿ ಹಿಂದುತ್ವ ಸಿದ್ಧಾಂತ ದೂರ ಹೋಗಿದೆ,
ಹೊಂದಾಣಿಕೆ ರಾಜಕೀಯ ಹೆಚ್ಚಾಗಿದೆ. ಹೊಂದಾಣಿಕೆ ರಾಜಕೀಯ ಶುದ್ದೀಕರಣ ಆಗಲಿ ಎಂಬ ಆಸೆ ನನ್ನದು, ಅನೇಕ ಮುಖಂಡರ ಆಸೆಯೂ ಅದೇ ಆಗಿದೆ. ಬಿಜೆಪಿ ಶುದ್ದೀಕರಣ ಆಗುತ್ತದೆ, ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ. ಆದರೆ ಬಿಜೆಪಿಯೊಳಗಿನ ವ್ಯವಸ್ಥೆ ಸರಿಯಿಲ್ಲ, ಅದು ಬದಲಾಗಬೇಕು ಎಂದರು ಹೇಳಿದರು.
ಇನ್ನೂ ಶಿಕಾರಿಪುರದಲ್ಲಿ ನಮ್ಮ ಭಿಕ್ಷೆ ಎಂದು ಡಿಕೆಶಿ ಹೇಳಿದ್ದರು. ನಾನು ವರುಣಾದಲ್ಲಿ ನಿಂತಿದ್ದರೆ ಸಿದ್ದರಾಮಯ್ಯ ಕಥೆ ಏನಾಗುತ್ತಿತ್ತು ಎಂದು ವಿಜಯೇಂದ್ರ ಹೇಳಿದ್ದಾರೆ. ಅಂದರೆ ನಾನೇ ಗೆಲ್ಲಿಸಿದೆ ಅಂತಾ ತಾನೇ ಅರ್ಥ? ಇದು ಹೊಂದಾಣಿಕೆ ರಾಜಕೀಯ ಅಲ್ಲದೇ ಇನ್ನೇನು? ರಾಜಕೀಯ ಬೆತ್ತಲೆ ಇದು ಎಂದರು.