ಮಹದಾಯಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಬಿಜೆಪಿ ಸಿದ್ಧ: ವಿಜಯೇಂದ್ರ!

0
Spread the love

ಬೆಂಗಳೂರು: ಮಹದಾಯಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಬಿಜೆಪಿ ಸಿದ್ಧ ಎಂದು ವಿಜಯೇಂದ್ರ ಹೇಳಿದ್ದಾರೆ. ಮಹದಾಯಿ ಯೋಜನೆಗೆ ಗೋವಾ ಸಿಎಂ ಕ್ಯಾತೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಸಿಎಂ ರಾಜಾರೋಷವಾಗಿ ಹೇಳಿಕೆ ನೀಡಿದ್ದಾರೆ.

Advertisement

ಸಂತೋಷ, ರಾಜ್ಯ ಬಿಜೆಪಿ ಸದಾ ರಾಜ್ಯದ ಜನರ ಜೊತೆ ಇರುತ್ತದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ರಾಜ್ಯ ಬಿಜೆಪಿ ಸಿದ್ಧವಾಗಿರುತ್ತದೆ. ಗೋವಾ ಮುಖ್ಯಮಂತ್ರಿ ಹಾಗೂ ಪ್ರಹ್ಲಾದ್ ಜೋಶಿ ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಕರ್ನಾಟಕದ ಹಿತಾಸಕ್ತಿ ಬಲಿ ಕೊಡಲು ಬಿಜೆಪಿ ಅವಕಾಶ ನೀಡಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಪ್ರಧಾನಿ ಮೋದಿ ಅವರ 4078 ದಿನ ದಾಖಲೆಗೆ ಅಭಿನಂದನೆ ಸಲ್ಲಿಸಿದರು. ಮೋದಿ ಹೊಸ ದಾಖಲೆ ಬರೆದಿದ್ದಾರೆ. ನೆಹರು ಬಳಿಕ ಹೆಚ್ಚು ದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಆಡಳಿತ ನಡೆಸುತ್ತಿದ್ದಾರೆ ಎಂದು ತಿಳಿಸಿ ಸಂಭ್ರಮಿಸಿದರು.

ನರೇಂದ್ರ ಮೋದಿ ಅವರು ದೇಶದ ಸೇವಕನಾಗಿ ಆಡಳಿತ ನಡೆಸುತ್ತಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿ ಹೇರಿಕೆ ಮಾಡದೇ, ಯಾವುದೇ ಅನುಕಂಪದ ಲಾಭ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಪರಿಶ್ರಮದಿಂದ ಅಭಿವೃದ್ಧಿ ಆಡಳಿತ ನಡೆಸುತ್ತಿದ್ದಾರೆ. ಮೋದಿಯವರಿಗೆ ದೇಶದ ಪರವಾಗಿ, ರಾಜ್ಯದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here