ಮೈಸೂರು: ಇದು ಎಟಿಎಂ ಸರಕಾರ ಎಂಬ ಬಿಜೆಪಿ ಟ್ವೀಟ್ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ? ಕೋಟ್ಯಾಂತರ ರೂಪಾಯಿ ಹಣದಲ್ಲಿ ಆಪರೇಷನ್ ಕಮಲ ಮಾಡಿದವರು ನಮ್ಮ ಬಗ್ಗೆ ಮಾತಾಡುತ್ತಾರೆ ? ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ.
ಬಿಜೆಪಿಯವರು ಸಾಲ ಮಾಡಿ ಅರ್ಥಿಕವಾಗಿ ರಾಜ್ಯ ದಿವಾಳಿ ಮಾಡಿ ಹೋಗಿದ್ದಾರೆ. ಹಣ ಇರದಿದ್ದರು ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡೀಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿತ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ. ಹೈಕಮಾಂಡ್ ಗೆ ದುಡ್ಡು ಕಳಿಸುತ್ತೇವೆ ಎಂಬುದು ಸುಳ್ಳು. ನಾವು ಯಾರಿಗೂ ಒಂದು ಪೈಸೆ ಕೊಟ್ಟಿಲ್ಲ ಎಂದು ಹೇಳಿದರು.