ಮಂಗಳೂರು: ಬಿಜೆಪಿ ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರವನ್ನು ಕೆಡವುತ್ತಿತ್ತು. ಆದರೆ ಈಗ ಬೇರೆ ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡ್ತಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿದೆ. ನ್ಯಾಯಾಂಗ ಹೋರಾಟ ಆಗುತ್ತಿದೆ ಎಂದು ಸಿಎಂ ಪರ ಬ್ಯಾಟ್ ಬೀಸಿದರು.
ಯಡಿಯೂರಪ್ಪ ಪ್ರಕರಣ 20 ಕೋಟಿ ಚೆಕ್ ಮೂಲಕ ಲಂಚ ಪಡೆದಿದ್ದಾರೆ. ಗಡಿಪಾರಾಗಿದ್ದ ಅಮಿತ್ ಶಾ ಕೂಡ ಆ ನಂತರ ಮಂತ್ರಿಯಾಗಿಲ್ವಾ?. ಬಿಜೆಪಿ ನಾಯಕರ ಮೇಲೆ ಗಂಭೀರ ಆರೋಪಗಳಿತ್ತು. ಈ ಆರೋಪ ಕಪೋಲಕಲ್ಪಿತ ಆಗಿತ್ತು. ರಾಜ್ಯಪಾಲರು ಈ ಹಿಂದೆ ದಲಿತ ರಾಜಕಾರಣಿ ಆಗಿದ್ದವರು. ಗೆಹ್ಲೋಟ್ ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ ಎಂದಿದ್ದಾರೆ.



