ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ: ಡಾ.ಜಿ.ಪರಮೇಶ್ವರ್‌

0
Spread the love

ಬೆಂಗಳೂರು: ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ.

Advertisement

ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯ ಒಳಗೆ ಮತ್ತು ಹೊರಗೆ ಹಲವಾರು ಸಂದರ್ಭಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ತಪ್ಪುಗಳನ್ನು ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದಾರೆ. ಹೀಗಾಗಿ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದರು.

ಇನ್ನೂ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಹೆಸರಿಲ್ಲ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿ ಅನಾವಶ್ಯಕ ಗೊಂದಲ ಉಂಟುಮಾಡುತ್ತಿದೆ ಎಂದರು.


Spread the love

LEAVE A REPLY

Please enter your comment!
Please enter your name here