ಮಂಡ್ಯ: ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಸಚಿವ ಸತೀಶ್ ಜಾರಕಿಹೋಳಿ ಹೇಳಿಕೆ ನೀಡಿದ್ದಾರೆ. ಮುಡಾ ವಿಚಾರವಾಗಿ ಬಿಜೆಪಿಯವರು ಬೆಂಗಳೂರಿನಿಂದ ಮೈಸೂರು ಚಲೋ ಹಮ್ಮಿಕೊಂಡಿರುವುದಕ್ಕೆ ಈಗಾಗಲೇ ಸಿಎಂ ಪ್ರತಿಕ್ರಿಯಿಸಿದ್ದಾರೆ. ಆದರೂ ಬಿಜೆಪಿಯವರು ಪಾದಯಾತ್ರೆ ಹಮ್ಮಿಕೊಂಡಿದ್ದು, ಅವರು ಪ್ರತಿಭಟನೆ ನಡೆಸುವ ಸ್ಥಾನದಲ್ಲಿದ್ದು,
Advertisement
ನಾವು ಉತ್ತರ ಕೊಡುವ ಸ್ಥಾನದಲ್ಲಿದ್ದೇವೆ. ನಾವು ಉತ್ತರ ನೀಡುತ್ತೇವೆ ಎಂದರು.ಇನ್ನೂ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ವಿಚಾರ ಚುನಾವಣೆಗೆ ಮೊದಲು ಚರ್ಚೆಯಾಗಿತ್ತು, ಸದ್ಯ ನಿಂತಿದೆ. ಹೀಗಾಗಿ ನಾನು ಮಾತನಾಡುವುದಿಲ್ಲ. ಅದರ ಅವಶ್ಯಕತೆ ಈಗ ಇಲ್ಲ. ನನಗೆ ಆಸೆಯಿಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಆದರೂ ಕೊಡುವುದು, ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರವಾಗಿದೆ ಎಂದರು.