ಬೆಂಗಳೂರು;- ಕಳೆದ ಸೋಮವಾರ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಓಪನ್ ಹಾರ್ಟ್ ಸರ್ಜರಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದು ವಾರ್ಡ್ ಗೆ ಶಿಫ್ಟ್ ಆಗಲಿದ್ದಾರೆ. ಕಳೆದ ನಾಲ್ಕು ದಿನದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
Advertisement
ಇದೀಗ ಬೊಮ್ಮಾಯಿಯವರಿಗೆ ಲಘು ಶಸ್ತ್ರ ಚಿಕಿತ್ಸೆ ನಡೆದಿದ್ದು, ಇಂದು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಆಗಲಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವ ಬಸವರಾಜ ಬೊಮ್ಮಾಯಿ, ನಾಲ್ಕು ದಿನಗಳ ಬಳಿಕ ಇಂದು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಆಗಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆಪ್ತ ಮೂಲಗಳು ಸ್ಪಷ್ಟನೆ ನೀಡಿವೆ.