ವಿಜಯಪುರ: ಬಿಜೆಪಿ ಮುಖಂಡ ವಿಜೂಗೌಡ ಪಾಟೀಲ್ ಪುತ್ರನ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ವಿಜಯಪುರ-ಕಲಬುರಗಿ ಟೋಲ್‌ನಲ್ಲಿ ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಮರ್ಥಗೌಡ ಪಾಟೀಲ್ ಮತ್ತು ಸ್ನೇಹಿತರು ಥಾರ್ ವಾಹನದಲ್ಲಿ ವಿಜಯಪುರದಿಂದ ಸಿಂದಗಿ ಕಡೆ ತೆರಳುತ್ತಿದ್ದರು. ಈ ವೇಳೆ ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್ ಪ್ಲಾಜಾಯಲ್ಲಿ ಸಿಬ್ಬಂದಿ ವಾಹನ ನಿಲ್ಲಿಸಿ ಟೋಲ್ ಶುಲ್ಕ ಪಾವತಿಸಲು ಕೇಳಿದ್ದಾರೆ.ಗ ಸಮರ್ಥಗೌಡ ನಾನು ವಿಜೂಗೌಡ ಪಾಟೀಲ್ ಪುತ್ರ ಎಂದು ಹೇಳಿದ್ದಾನೆ.
ಆಗ ಟೋಲ್ ಸಿಬ್ಬಂದಿ ಯಾವ ವಿಜೂಗೌಡ ಎಂದು ಕೇಳಿದ್ದಾರೆ. ಇದರಿಂದ ಕೋಪಗೊಂಡ ಸಮರ್ಥಗೌಡ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ.ಹಲ್ಲೆ ಬಳಿಕ ಟೋಲ್ ಸಿಬ್ಬಂದಿ ಯಾವುದೇ ಹಣ ಪಡೆಯದೇ ವಾಹನವನ್ನು ಬಿಟ್ಟಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸದ್ಯ ಗಾಯಾಳು ಸಂಗಪ್ಪ ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲಾಗಿದ್ದು, ಟೋಲ್ ಸಿಬ್ಬಂದಿ ದೂರು ದಾಖಲಿಸಲು ಮುಂದಾಗಿದ್ದಾರೆ.


