ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ.!

0
Spread the love

ಕಲಬುರಗಿ: ರಾಜ್ಯದಲ್ಲಿ ಮತ್ತೋರ್ವ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಂಟಕ ಎದುರಾಗಿದೆ. ಸಚಿವರ ಆಪ್ತ ರಾಜು ಕಪನೂರು ಅವರ ವಿರುದ್ಧ ಆರೋಪ ಮಾಡಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ವಿಚಾರವಾಗಿ ಬಿಜೆಪಿ ನಾಯಕರು ಪ್ರಿಯಾಂಕ್ ವಿರುದ್ಧ ಮುಗಿಬಿದ್ದಿದ್ದು,

Advertisement

ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರನ್ನು ಮಾರ್ಗ ಮಧ್ಯೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಖರ್ಗೆ ಮನೆಗೆ ಮುತ್ತಿಗೆಗೆ ಕೇಸರಿ ಪಡೆ ಮುಂದಾಗಿತ್ತು. ಸಚಿವರ ಮನೆಯಲ್ಲಿ ಪೊಲೀಸ್ ಬಿಗಿಭದ್ರತೆ ಕಲ್ಪಿಸಲಾಗಿದೆ.

ಜಗತ್ ವೃತ್ತದಿಂದ ಖರ್ಗೆ ಮನೆವರೆಗೆ ಪಾದಯಾತ್ರೆ ನಡೆಸಿ ಮುತ್ತಿಗೆಗೆ ಹೊರಟಿದ್ದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೋರಾಟದಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೈರಾಗಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ ಹಿನ್ನೆಲೆ ಕಲಬುರ್ಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರಿಯಾಂಕ್ ಖರ್ಗೆ ಮನೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಪೊಲೀಸ್ ಹೈ ಅಲರ್ಟ್ ಆಗಿದ್ದಾರೆ.

 


Spread the love

LEAVE A REPLY

Please enter your comment!
Please enter your name here