ಧಾರವಾಡ:-ಬಿಜೆಪಿ ಮಹಿಳಾ ಮೋರ್ಚಾ ಮುಖಂಡೆಯ ಪತಿ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ.
Advertisement
ಶಶಿಕಲಾ ಮಸೂತಿ ಅವರ ಪತಿ 50 ವರ್ಷದ ಈಶ್ವರ್ ಮಸೂತಿ ನೇಣಿಗೆ ಶರಣಾದವರು. ಉಪ್ಪಿನ ಬೆಟಗೇರಿ ಗ್ರಾಮದ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗೆ ಆರೋಗ್ಯ ಸಮಸ್ಯೆಯೇ ಕಾರಣ ಎಂದು ಶಂಕಿಸಲಾಗಿದೆ. ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಇದ್ದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ಈಶ್ವರ ಮಸೂತಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕಿ ಸೀಮಾ ಮಸೂತಿ ಅವರ ಸಂಬಂಧಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಗರಗ ಪೊಲೀಸ್ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ