ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಗದಗ ವಿಧಾನಸಭಾ ಕ್ಷೇತ್ರದ ಸದಸ್ಯತಾ ಅಭಿಯಾನ ಕಾರ್ಯಾಗಾರ ಜರುಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ಹಿರಿಯರಾದ ಎಂ.ಎಸ್. ಕರೀಗೌಡ್ರ ಮಾತನಾಡಿ, ಬಿಜೆಪಿ ಒಂದು ಪಕ್ಷವಾಗಿ ಸಂಘಟನೆಯನ್ನು ಬಲಪಡಿಸಲು ಅನೇಕ ಆಂತರಿಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ನಡೆಸುತ್ತಿರುತ್ತದೆ.
ಸದಸ್ಯತಾ ಅಭಿಯಾನ-೨೦೨೪ನ್ನು ಯಶಸ್ವಿಗೊಳಿಸಿ ಪ್ರತಿ ಮಂಡಲದಿಂದ ಹೆಚ್ಚು ಹೆಚ್ಚು ಸದಸ್ಯರನ್ನಾಗಿಸಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸೋಣ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಮಾತನಾಡಿ, ಕಳೆದ 10 ವರ್ಷಗಳಲ್ಲಿ ದೇಶದಾದ್ಯಂತ ಪಕ್ಷದ ಚಟುವಟಿಕೆಯಲ್ಲಿ ಬೆಳವಣಿಗೆಯಾಗಿದೆ. ಸದಸ್ಯತ್ವ ದೃಷ್ಟಿಯಿಂದ ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷದ ಬೂತ್ ಮಟ್ಟದ ಸಮಿತಿಗಳು ಬಹುಪಾಲು 10.5 ಲಕ್ಷ ಬೂತ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಂಸದರಿಂದ ಪಂಚಾಯತ್ ಸದಸ್ಯರವರೆಗೆ ಹೆಚ್ಚಿನ ಸಂಖ್ಯೆಯ ಚುನಾಯಿತ ಪ್ರತಿನಿಧಿಗಳನ್ನು ನಾವು ಹೊಂದಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ನೀಡಿದ `ಸೇವಾ ಹಿ ಸಂಘಟನೆ’ ಮಂತ್ರದೊಂದಿಗೆ ಪಕ್ಷದ ಕಾರ್ಯಕರ್ತರೊಂದಿಗೆ ತಮ್ಮ ರಾಜಕೀಯ ಮತ್ತು ಸಾಮಾಜಿ ಕರ್ತವ್ಯಗಳನ್ನು ಸಮಾನ ಬದ್ಧತೆಯಿಂದ ನಿರ್ವಹಿಸುತ್ತಿದ್ದಾರೆ. ಎಲ್ಲ ಕಾರ್ಯಕರ್ತರು ಅಭಿಯಾನವನ್ನು ಯಶಸ್ವಿಗೊಳಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗದಗ ನಗರ ಮಂಡಲ ಅಧ್ಯಕ್ಷ ಅನಿಲ ಅಬ್ಬಿಗೇರಿ, ಪಕ್ಷದ ಹಿರಿಯರಾದ ಜಗನ್ನಾಥಸಾ ಭಾಂಡಗೆ, ಪ್ರಮುಖರಾದ ರವಿ ದಂಡಿನ, ಭದ್ರೇಶ ಕುಸ್ಲಾಪೂರ, ಬೂದಪ್ಪ ಹಳ್ಳಿ, ಗಂಗಾಧರ ಹಬೀಬ, ಪ್ರಕೋಷ್ಠಗಳ ಸಂಯೋಜಕರಾದ ಶಶಿಧರ ದಿಂಡೂರ, ಯುವ ಮೋರ್ಚಾ ಅಧ್ಯಕ್ಷ ಸಂತೋಷ ಅಕ್ಕಿ, ರವಿ ವಗ್ಗನವರ ಸ್ಭೆರಿದಂತೆ ಪಕ್ಷದ ಬೂತ್ ಅಧ್ಯಕ್ಷರು, ಮುಖಂಡರು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.