ಕಿರುಕುಳ, ಜಾತಿ ನಿಂದನೆ ಕೇಸ್: BJP ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್!

0
Spread the love

ಬೆಂಗಳೂರು:- ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಕೇಸ್ ಗೆ ಸಂಬಂಧಿಸಿದಂತೆ BJP ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ. ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆಯಾಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

Advertisement

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ 3 (1) r,s ಸೆಕ್ಷನ್ ಅನ್ವಯಿಸುವುದಿಲ್ಲವೆಂದು ಎಸ್ ಪಿಪಿ ಒಪ್ಪಿಕೊಂಡಿದ್ದಾರೆ. 3 (1) u ಅಡಿಯೂ ದೂರಿನಲ್ಲಿನ ಆರೋಪ ಅನ್ವಯವಾಗುವುದಿಲ್ಲ. 41 ಎ ಅಡಿ ನೋಟಿಸ್ ನೀಡಬೇಕಿತ್ತು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್, ನಾಳೆಗೆ ಆದೇಶ ಕಾಯ್ದಿರಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here