ಬೆಂಗಳೂರು:- ಅತ್ಯಾಚಾರ ಪ್ರಕರಣದಲ್ಲಿ ಇಂದಿಗೆ ಬಿಜೆಪಿ ಶಾಸಕ ಮುನಿರತ್ನ ಅವರ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅಕ್ಟೋಬರ್ 19 ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.