ಬೆಂಗಳೂರು:- ಮಂಗಳವಾರ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾಗಿದ್ದ ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ. ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ಘಟನೆ ಬಗ್ಗೆ ಭಾರತಿನಗರ ಠಾಣೆಗೆ ದೂರು ನೀಡಿದ್ದು, ದೂರಿನ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಇದರಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದು, ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ.
ಕಿತ್ತಕನೂರು ಜಾಗದ ವಿಚಾರವಾಗಿ ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್ , ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ.