ಹುಬ್ಬಳ್ಳಿ: ಉಪ ಚುನಾವಣೆಯ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯ ನಂತರ ಒಂದಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ,
Advertisement
ಅವರ ಹೆಸರು ಮತ್ತು ವಿವರಗಳನ್ನು ಬಹಿರಂಗಪಡಿಸಲಾಗಲ್ಲ, ಬಿಜೆಪಿಯಲ್ಲಿರುವ ತನ್ನ ಸ್ನೇಹಿತರು ಸಂಪರ್ಕದಲ್ಲಿದ್ದಾರೆ, ಹೈಕಮಾಂಡ್ ಜೊತೆ ಚರ್ಚಿಸಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಇನ್ನೂ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಗಡುವು ಫಿಕ್ಸ್ ಮಾಡುತ್ತಾ ಹೋಗುತ್ತಾರೆ, ಮುಂದಿನ ಮೂರೂವರೆ ವರ್ಷಗಳ ಕಾಲ ಅವರು ಇದನ್ನೇ ಮಾಡಲಿದ್ದಾರೆ ಮತ್ತು ನಂತರ ಚುನಾಅವಣೆ ನಡೆದು ಪುನಃ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ಇದನ್ನೇ ಮುಂದುವರಿಸಲಿದ್ದಾರೆ ಎಂದು ಸವದಿ ಹೇಳಿದರು.