ಬೆಂಗಳೂರು:- ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದೆ.
ವಾಲ್ಮೀಕಿ ನಿಗಮದ ಹಗರಣ, SCP-TSP ಹಣ ದುರುಪಯೋಗ ಹಾಗೂ ಮುಡಾ ಹಗರಣ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ಮುಗಿ ಬಿದ್ದಿರುವ ಬಿಜೆಪಿ ಮುಖಂಡರು ಪ್ರತಿಭಟನೆ ಮುಂದಾಗಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಬಳಿಕ ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ. ಮುತ್ತಿಗೆ ಹಾಕುವ ಹಿನ್ನೆಲೆ ಫ್ರೀಡಂ ಪಾರ್ಕ್ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಫ್ರೀಡಂ ಪಾರ್ಕ್ ಬಳಿಯೇ ಕಾರ್ಯಕರ್ತರ ವಶಕ್ಕೆ ಪಡೆಯಲು ನಿರ್ಧಾರ ಮಾಡಲಾಗಿದೆ.



