ಹುಬ್ಬಳ್ಳಿ: ಸಂವಿಧಾನ ಬದಲಾವಣೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ ಎನ್ನಲಾಗಿದ್ದ ವಿಚಾರ ರಾಜ್ಯರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಈ ಸಂಬಂಧ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ನಾನು ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂಬ ಡಿಸಿಎಂ ಶಿವಕುಮಾರ್ ಹೇಳಿಕೆಗೆ ಎಲ್ಲೆಡೆಯೂ ಬಾರಿ ವಿರೋಧ ವ್ಯಕ್ತವಾಗಿದ್ದು, ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿಯಲ್ಲಿ
ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.