ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬಿಜೆಪಿ ಶಿರಹಟ್ಟಿ ಮಂಡಲದ ವತಿಯಿಂದ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರವನ್ನು ಶಾಸಕ ಡಾ. ಚಂದ್ರು ಲಮಾಣಿ ತಮ್ಮ ಕಾರ್ಯಾಲಯದಲ್ಲಿ ಉದ್ಘಾಟಿಸಿದರು.

Advertisement

ನಂತರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೆ. 17ರಿಂದ ಅಕ್ಟೋಬರ್ 2ರವರೆಗೆ ವಿವಿಧ ಸೇವಾ ಕಾರ್ಯಗಳು ನಡೆಯಲಿದ್ದು, ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ತಾಯಿಯ ಹೆಸರಿನಲ್ಲಿ ಒಂದು ಸಸಿ, ಚಿತ್ರಕಲಾ ಕಾರ್ಯಕ್ರಮಗಳು ಜರುಗಲಿವೆ. ಬಿಜೆಪಿ ಪ್ರತಿಯೊಬ್ಬ ಕಾರ್ಯಕರ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಶಿರಹಟ್ಟಿ ಮಂಡಲದ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ್, ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ ಮಾತನಾಡಿದರು. ಜಿ.ಪಂ ಮಾಜಿ ಸದಸ್ಯ ಶಿವಪ್ರಕಾಶ್ ಮಹಾಜನಶೆಟ್ಟರ್, ಫಕೀರೇಶ ರಟ್ಟಿಹಳ್ಳಿ, ಸಂದೀಪ್ ಕಪ್ಪತ್ನವರ, ತಿಮ್ಮರೆಡ್ಡಿ ಮರಡ್ಡಿ, ನಂದಾ ಪಲ್ಲೇದ, ಮಹೇಶ್ ಬಡ್ನಿ, ಶಂಕರ ಮರಾಠೆ, ಜಾನು ಲಮಾಣಿ, ಬಸವರಾಜ ವಡವಿ, ಸಂತೋಷ್ ಓಬಾಜಿ, ಪರಶುರಾಮ್ ಡೊಂಕಬಳ್ಳಿ, ತಿಪ್ಪಣ್ಣ ಕೊಂಚಗೇರಿ, ಮೋಹನ್ ಗುತ್ಯಮ್ಮನವರ, ಪ್ರವೀಣಗೌಡ ಪಾಟೀಲ, ಅನಿಲ ಮುಳಗುಂದ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here