ಬೆಳಗಾವಿ: ರೈತರ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಯವರು ರೈತರ ಮೇಲೆ ಗಾಡಿ ಹರಿಸಿದ್ದರು.
ಇವರು ಇನ್ನೇನು ರೈತರ ಪರವಾಗಿ ಮಾತನಾಡುತ್ತಾರೆ. ಡಿ.ಕೆ. ಶಿವಕುಮಾರ್ ಸಿಎಂ ಪೋಸ್ಟ್ ವಿಚಾರಕ್ಕೆ ನಾನು ವಿಷಾದಿಸುವೆ. ಈ ವಿಚಾರವನ್ನು ನನ್ನ ತಮ್ಮ ತಕ್ಷಣ ನನಗೆ ತಿಳಿಸಿದ್ದ, ಆದರೆ ಪೇಜ್ ಹ್ಯಾಂಡಲ್ ಮಾಡುವವರ ಅಚಾತುರ್ಯದಿಂದ ಹೀಗಾಗಿದೆ, ಅದು ತಪ್ಪಾಗಿದೆ. ನಾವು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೇವೆ ಎಂದರು.
ಸಿಎಂ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿ, ನಾನು ಏನೂ ಹೇಳಲ್ಲ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದರೆ ಗೊಂದಲಕ್ಕೆ ಎಡೆಮಾಡಿಕೊಡಬಾರದು ಎಂದು ಹೆಬ್ಬಾಳ್ಕರ್ ಹೇಳಿದರು.



