ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ: ಚಾಲಕ ಗ್ರೇಟ್ ಎಸ್ಕೇಪ್!

0
Spread the love

ಚಿಕ್ಕಮಗಳೂರು:- ತಾಲೂಕಿನ ಲಕ್ಯ ಕ್ರಾಸ್ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸೇರಿದ ಕಾರು ಶುಕ್ರವಾರ ಅಪಘಾತಕ್ಕೀಡಾಗಿದೆ.

Advertisement

ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ಕಾರು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅದೃಷ್ಟವಶಾತ್​ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ಸದ್ಯ ಪೊಲೀಸರು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಘಟನೆಯಲ್ಲಿ ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬೀರೂರು ಮೂಲದ ಹರೀಶ್ ಎಂಬುವರಿಗೆ ಸೇರಿದ ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು. ಸದ್ಯ ಪೊಲೀಸರು ಕಾರು ಸೇರಿದಂತೆ ಲಾರಿಯನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here