ಪ್ರಧಾನಿ ಮೋದಿ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌!

0
Spread the love

ನವದೆಹಲಿ: ಕರ್ನಾಟಕ ಬಿಜೆಪಿಯಲ್ಲಿ ಕೆಲ ಮಹತ್ವದ ಬೆಳವಣಿಗೆಗಳು ನಡೆದಿವೆ. ಜನವರಿಯಲ್ಲಿ ರಾಜ್ಯ ಘಟಕದಲ್ಲಿ ಮೇಜರ್ ಸರ್ಜರಿಯಾಗುತ್ತೆ ಎನ್ನುವ ಚರ್ಚೆಗಳು ಜೋರಾಗಿವೆ. ಮತ್ತೊಂದೆಡೆ ಹೈಕಮಾಂಡ್ಗೆ ಸಂದೇಶ ರವಾನಿಸಲು ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಬಲಿಗರು ಯಡಿಯೂರಪ್ಪ ಉತ್ಸವವನ್ನ ಮಾಡಲು ಮುಂದಾಗಿದ್ದಾರೆ‌. ಇದರ ಬೆನ್ನಲ್ಲೇ ಬಿ.ವೈ ವಿಜಯೇಂದ್ರ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದಾರೆ.

Advertisement

ಪ್ರಧಾನಿ ಭೇಟಿಯಾದ ಫೋಟೋವನ್ನು ತಮ್ಮ ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ಮೋದಿ ಅವರನ್ನು ಹಾಡಿಹೊಗಳಿದ್ದಾರೆ. ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ.

ಅವರ ಆಶೀರ್ವಾದ, ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು ಎಂದು ಬರೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here