HomeKarnataka Newsಬಿಡದಿ ಟೌನ್ ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಬೆಂಬಲ.. ಒಟ್ಟಾಗಿ ಹೋರಾಡಲು ತೀರ್ಮಾನ ಎಂದ...

ಬಿಡದಿ ಟೌನ್ ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಬೆಂಬಲ.. ಒಟ್ಟಾಗಿ ಹೋರಾಡಲು ತೀರ್ಮಾನ ಎಂದ HDK!

For Dai;y Updates Join Our whatsapp Group

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಿಜೆಪಿ ಸಾಂಕೇತಿಕವಾಗಿ ಬೆಂಬಲ ನೀಡಲು ನಿರ್ಧರಿಸಿದೆ. ಬಿಜೆಪಿ-ಜೆಡಿಎಸ್ ನಾಯಕರು ಒಗ್ಗಟ್ಟಾಗಿ ಹೋರಾಟ ನಡೆಸುವ ತೀರ್ಮಾನಕ್ಕೆ ಬಂದಿದ್ದು, ನಾಳೆ ನಡೆಯಲಿರುವ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಿದ್ದರು.

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಆ.9 ಮತ್ತು 10ರಂದು ಎರಡು ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಬೈರಮಂಗಲದಿಂದ ಕೆಂಗೇರಿವರೆಗೆ ಪಾದಯಾತ್ರೆ ಸಾಗಲಿದ್ದು, ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್-ಬಿಜೆಪಿ ಜಂಟಿ ಸಮಾರೋಪ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಆ.19 ಅಥವಾ 20ರಂದು ಸಮಾರೋಪ ಸಮಾವೇಶ ನಡೆಯುವ ಸಾಧ್ಯತೆ ಇದೆ.

ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನಾಳೆ ಆರಂಭವಾಗಲಿರುವ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ರೈತರ ಪರವಾಗಿ ಈಗಾಗಲೇ ಬಿಜೆಪಿ ಹಲವು ಸಭೆಗಳನ್ನು ನಡೆಸಿದೆ. ಬಿಡದಿ ಟೌನ್‌ಶಿಪ್‌ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್‌ ಯೋಜನೆಗೆ ರೈತರು ಭೂಮಿ ನೀಡಲು ಸಿದ್ಧರಿಲ್ಲ. ರೈತರು ಮತ್ತು ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ಗಮನಿಸುತ್ತಿದೆ. ಹೀಗಾಗಿ ಈ ವಿಚಾರವನ್ನು ಸದನದಲ್ಲಿಯೂ ಪ್ರಸ್ತಾಪಿಸಿ ಚರ್ಚೆ ನಡೆಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ ಎಂದು ಟೀಕಿಸಿದರು. ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ ಮೂರು ವರ್ಷಗಳನ್ನು ಕಳೆದ ಸರ್ಕಾರ ಇದೀಗ ಸಚಿವರ ಖಾತೆ ಹಂಚಿಕೆ ವಿಚಾರದಲ್ಲೂ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ಈ ಸ್ಥಿತಿ ಅದರ ದಿವಾಳಿತನವನ್ನು ತೋರಿಸುತ್ತದೆ ಎಂದು ಕುಮಾರಸ್ವಾಮಿ ಟೀಕಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img