ವಿಜಯಸಾಕ್ಷಿ ಸುದ್ದಿ, ಗದಗ: ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಸಿರುವುದನ್ನು ಖಂಡಿಸಿ, ಧರ್ಮದ ಆಧಾರದ ಮೇಲೆ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿ ಕಲ್ಪಿಸಿರುವುದನ್ನು ವಿರೋಧಿಸಿ ಎಪ್ರಿಲ್ 22ರಂದು ಬೆಳಿಗ್ಗೆ 10 ಗಂಟೆಗೆ ಗದಗ ನಗರದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ.
ನಗರದ ಬಸವೇಶ್ವರ ಸರ್ಕಲ್‌ನಿಂದ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿ ಗಾಂಧಿ ಸರ್ಕಲ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಯ ಮೂಲಕ ಮುಕ್ತಾಯಗೊಳ್ಳಲಿದ್ದು, ಈ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್. ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ, ಮಾಜಿ ಸಚಿವರುಗಳಾದ ಬಿ.ಶ್ರೀರಾಮುಲು, ಸಿ.ಸಿ. ಪಾಟೀಲ, ಕಳಕಪ್ಪ ಬಂಡಿ, ಶಾಸಕರಾದ ಡಾ. ಚಂದ್ರು ಲಮಾಣಿ, ಎಸ್.ವಿ. ಸಂಕನೂರ, ಮಹೇಶ ಟೆಂಗಿನಕಾಯಿ, ಎನ್.ರವಿಕುಮಾರ, ಹರೀಶ ಪೂಂಜಾ, ಪಿ.ರಾಜೀವ್, ಮುಖಂಡರಾದ ಅನಿಲ ಮೇಣಸಿನಕಾಯಿ, ಶರಣು ತಳ್ಳಿಕೇರಿ, ತಮ್ಮೇಶಗೌಡ, ಎಂ.ಎಸ್. ಕರೀಗೌಡ್ರ, ಲಿಂಗರಾಜ ಪಾಟೀಲ, ಆರ್.ಕೆ. ಚವ್ಹಾಣ, ಪಕ್ಕೀರೇಶ ರಟ್ಟಿಹಳ್ಳಿ ಭಾಗವಹಿಸಲಿದ್ದಾರೆ.
ಪಕ್ಷದ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಜನಾಕ್ರೋಶ ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ವಿನಂತಿಸಿದ್ದಾರೆ.