ನವದೆಹಲಿ: ಮಹಾರಾಷ್ಟ್ರ ಸರ್ಕಾರ ರಚನೆಯ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮಹಾಯುತಿ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಸರ್ಕಾರ ರಚಿಸಲು ಸಿದ್ಧವಾಗಿದೆ. ಇದರ ಬೆನ್ನಲ್ಲೇ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡ ಬಿಜೆಪಿ ಇದೀಗ ತಿರಸ್ಕರಿಸಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ವರ್ಷಗಳ ಕಾಲ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡ ಬಿಜೆಪಿ ಇದೀಗ ತಿರಸ್ಕರಿಸಿದೆ ಎಂದು ಹೇಳಿದ್ದಾರೆ. ಅವರು ಮತ್ತೆ ಈ ರಾಜ್ಯದ ಸಿಎಂ ಆಗುವುದಿಲ್ಲ ಎಂದು ರಾವತ್ ಹೇಳಿದ್ದಾರೆ.
ತಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪಕ್ಷಗಳನ್ನು ದುರ್ಬಲಗೊಳಿಸಲು ಮತ್ತು ಕಿತ್ತೊಗೆಯಲು ಬಿಜೆಪಿ ತನ್ನ ರಾಜಕೀಯ ತಂತ್ರವನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಹಾಗೇ, ಆಡಳಿತಾರೂಢ ಮೈತ್ರಿಕೂಟವಾದ ಮಹಾಯುತಿಯಲ್ಲಿ ಬಿರುಕು ಮೂಡುವ ಸಾಧ್ಯತೆಯಿದೆ ಎಂದು ಸಂಜಯ್ ರಾವತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.