ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಬಿಹಾರದಲ್ಲಿ ನಮ್ಮನ್ನು ಅನುಸರಿಸುತ್ತಿದೆ: ಡಿಕೆಶಿ

0
Spread the love

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಬಿಹಾರದಲ್ಲಿ ನಮ್ಮನ್ನು ಅನುಸರಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ ಈಗ ಕರ್ನಾಟಕ ಮಾದರಿಯನ್ನು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅನುಸರಿಸುತ್ತಿದೆ ಎಂದು ಹೇಳಿದರು.

Advertisement

ಕೇವಲ ಬಿಹಾರ ಮಾತ್ರವಲ್ಲ, ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆಯ ನಂತರ ಯಾವ್ಯಾವ ರಾಜ್ಯಗಳಲ್ಲಿ ಚುನಾವಣೆ ನಡೆದಿದೆಯೋ ಅಲ್ಲೆಲ್ಲ ಬಿಜೆಪಿ ಕರ್ನಾಟಕದ ಉದಾಹರಣೆಯನ್ನು ಫಾಲೋ ಮಾಡಿದೆ. ಹರಿಯಾಣ, ರಾಜಸ್ತಾನ, ದೆಹಲಿ, ಮಧ್ಯಪ್ರದೇಶ, ಮಹಾರಾಷ್ಟ್ರ ಮೊದಲಾದ ರಾಜ್ಯಗಳಲ್ಲಿ ಬಿಜೆಪಿ ಇದನ್ನೇ ಮಾಡಿದ್ದು ಎಂದು ಶಿವಕುಮಾರ್ ಹೇಳಿದರು.


Spread the love

LEAVE A REPLY

Please enter your comment!
Please enter your name here