ಕಲಬುರಗಿ: ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ನಂದಿಕೂರ ಗ್ರಾಮದ ಬಳಿ ನಡೆದಿದೆ.
ಜ್ಯೋತಿ ಪಾಟೀಲ್ (35) ಆತ್ಮಹತ್ಯೆಗೆ ಶರಣಾದ ಕಾರ್ಯಕರ್ತೆಯಾಗಿದ್ದು, ನಂದಿಕೂರ ಗ್ರಾಮದ ಮಲ್ಲಿನಾಥ್ ಬಿರಾದಾರ್ ಮನೆಗೆ ತೇರಳಿದ್ದ ವೇಳೆ ಈ ಘಟನೆ ನಡೆದಿದೆ.
ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿಯಾಗಿದ್ದು, ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಬ್ಬಿಸಿದ್ದಾರೆ ಎಂದು ಹೇಳಲಾಗುತ್ತದೆ.
ಮಲ್ಲಿನಾಥ್ ಬಿರಾದಾರ್ ಪತ್ನಿ ಮೂರು ಜನ ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಬಾಗಿಲು ತೆರೆದ ತಕ್ಷಣ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.
ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



