ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲೇಶ್ವರ ಕ್ಷೇತ್ರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಅವರು ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರ ಆಪ್ತರಾಗಿದ್ದರು.
Advertisement
ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿ ಇರುವ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವೆಂಕಟೇಶ್ ಆತ್ಮಹತ್ಯೆ ನಿರ್ಧಾರ ತೆಗೆದುಕೊಳ್ಳಲು ಹಣಕಾಸು ಸಮಸ್ಯೆಗೆ ಕಾರಣ ಎನ್ನಲಾಗ್ತಿದೆ.
ಟೂರ್ಸ್ ಆ್ಯಂಡ್ ಟ್ರಾವೆಲ್ ಬ್ಯುಸಿನೆಸ್ ನಡೆಸುತ್ತಿದ್ರು, ಹಣದ ಸಮಸ್ಯೆ ಹೆಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಘಟನೆ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


