ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ನಡೆದ `ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಹೋರಾಟದಲ್ಲಿ ಕರ್ನಾಟಕ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಗದಗ ಜಿಲ್ಲಾ ಯುವ ಮೋರ್ಚಾ ತಂಡದ ಸದಸ್ಯರು ಹೋರಾಟದಲ್ಲಿ ಭಾಗವಹಿಸಿದರು.
Advertisement
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿ ಕತ್ತಿ, ಜಿಲ್ಲಾ ಕಾರ್ಯದರ್ಶಿ ಧರ್ಮರಾಜ ಕೋಂಚಿಗೇರಿ, ವಿನೋದ ಹಂಸನೂರ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸಚಿನ ಮಡಿವಾಳರ, ನಿಕಟಪೂರ್ವ ರೋಣ ಮಂಡಲ ಅಧ್ಯಕ್ಷ ಉಮೇಶ ಚೆನ್ನುಪಾಟೀಲ್, ಡಂಬಳ ಮಂಡಲ ಅಧ್ಯಕ್ಷ ಪ್ರಕಾಶ ಕೋತಂಬ್ರಿ, ಪ್ರಧಾನ ಕಾರ್ಯದರ್ಶಿ ಶಿವಾನಂದ ಬಂಡಿ, ಗದಗ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ ನರೇಗಲ್, ಮಂಡಲ ಕಾರ್ಯಕಾರಣಿ ಸದಸ್ಯ ವಿನಾಯಕ ಹೊರಕೇರಿ ಸೇರಿದಂತೆ ಯುವಕರು ಉಪಸ್ಥಿತರಿದ್ದರು.