ಮೈಸೂರು: ಬಿಜೆಪಿ ಹೋರಾಟದಿಂದ ದಸರಾ ಮೇಲೆ ಕೆಟ್ಟ ಪರಿಣಾಮ ಬೀರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡಿಬೆಟ್ಟ ಚಲೋಗೂ ಬಿಜೆಪಿಯಿಂದ ಪ್ಲ್ಯಾನ್ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂದುತ್ವ ಗಟ್ಟಿ ಆಗುತ್ತೆಂದು ಬಿಜೆಪಿ ಈ ಯಾತ್ರೆ ಪ್ಲ್ಯಾನ್ ಮಾಡುತ್ತಿದೆ.
ಇವರಿಂದ ಹಿಂದುತ್ವ ಗಟ್ಟಿಯಾಗಲ್ಲ. ಅಮಾನವೀಯ ನಡವಳಿಕೆ ತೋರುವವರು ಹಿಂದೂಗಳಲ್ಲ. ಮನುಷ್ಯತ್ವ ಇರುವವರು ಹಿಂದೂಗಳು ಎಂದು ವಾಗ್ದಾಳಿ ಮಾಡಿದರು. ಇನ್ನೂ ಬಿಜೆಪಿಯವರು ದಸರಾದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಅವರ ಮನೆಯನ್ನೂ ರಾಜಕೀಯಕ್ಕೆ ಬೇಕಾದರೆ ಬಳಸಿಕೊಳ್ಳುತ್ತಾರೆ.
ಸುಳ್ಳು ಹೇಳುವುದು ಬಿಟ್ಟು ಬಿಜೆಪಿಗೆ ಏನು ಗೊತ್ತು? ಬಿಜೆಪಿ ಹೋರಾಟದಿಂದ ದಸರಾ ಮೇಲೆ ಕೆಟ್ಟ ಪರಿಣಾಮ ಬೀರಲ್ಲ. ಹಿಂದೂಗಳೆಲ್ಲಾ ಬಿಜೆಪಿ ಜೊತೆ ಇಲ್ಲ ಎಂದಿದ್ದಾರೆ. ಇನ್ನು ದಸರಾ ಉದ್ಘಾಟನೆ ವಿಚಾರವಾಗಿ ಮಾತನಾಡಿದ ಅವರು, ಮುಷ್ತಾಕ್ಗೆ ಗೌರವ ಕೊಡಲು ದಸರಾ ಉದ್ಘಾಟನೆ ಮಾಡಿಸ್ತಿದ್ದೇವೆ. ದಸರಾ ನಾಡಹಬ್ಬ ಅಲ್ವಾ. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು ಸೇರಿ ಎಲ್ಲರೂ ಆಚರಿಸ್ತಾರೆ ಎಂದಿದ್ದಾರೆ.