ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ: 18 MES ಪುಂಡರ ವಿರುದ್ಧ ಕೇಸ್

0
Spread the love

ಬೆಳಗಾವಿ: ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ 18 ಎಂಇಎಸ್ ಪುಂಡರ ವಿರುದ್ಧ ಕೇಸ್ ದಾಖಲಾಗಿದೆ.

Advertisement

ಹೌದು ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನ ಆಚರಣೆ ಮಾಡಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್​​ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್ ಚವ್ಹಾಣ್​, ಸರಿತಾ ಪಾಟೀಲ್, ಸಾರಿಕಾ ಪಾಟೀಲ್, ಅಂಕುಶ ಕೇಸರಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಕೇಸ್​ ದಾಖಲಾಗಿದೆ.

ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿದ್ದರು. ಈ ಆಧಾರದ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ನವೆಂಬರ್ 1ರಂದು ಬೆಳಗಾವಿಯ ಸಂಭಾಜಿ ಉದ್ಯಾನದಿಂದ ಮೆರವಣಿಗೆ ಮಾಡಿದ್ದರು. ಕಪ್ಪು ಬಟ್ಟೆ ಧರಸಿ ನೂರಾರು ಜನ ಎಂಇಎಸ್ ಪುಂಡರು ಮೆರವಣಿಗೆಯಲ್ಲಿ ಭಾಗಿಯಾಗಿ ನಾಡದ್ರೋಹಿ ಘೋಷಣೆ ಕೂಗಿದ್ದರು.

ಇನ್ನೊಂದೆಡೆ ಕರಾಳ ದಿನ ಆಚರಣೆ ಅನುಮತಿ ಇಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೇಳಿದ್ದರು. ಆದರೂ ಸಹ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮಾಡಿ ಕರಾಳ ದಿನಾಚರಣೆ ಮಾಡಿದ್ದರು.

ಇದಕ್ಕೆ ಪೊಲೀಸರೇ ಭದ್ರತೆ ನೀಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಅಲ್ಲದೇ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕ ಕಾರಣವಾಗಿತ್ತು.


Spread the love

LEAVE A REPLY

Please enter your comment!
Please enter your name here